ಎಲ್ಲರಿಗೂ ನಮಸ್ಕಾರ, ಕರ್ನಾಟಕದಲ್ಲಿ ಮತ್ತೆ ಮಳೆ ಶುರುವಾಗಿದೆ ಕರ್ನಾಟಕ ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಮಾನ ಇಲಾಖೆಯು ಸೂಚನೆ ನೀಡಿದೆ ಇಂದು ಯಾವ ಯಾವ ಜಿಲ್ಲೆಗಳಲ್ಲಿ ಮಳೆ ಬರಲಿದೆ ಎಂಬುದನ್ನು ಈ ಲೇಖನದಲ್ಲಿ ನಾವು ಸಂಪೂರ್ಣವಾಗಿ ಮಾಹಿತಿ ನೀಡಿದ್ದೇವೆ.
ಕೆಲವು ಜಿಲ್ಲೆಗಳಲ್ಲಿ ಮಳೆ ಆರ್ಭಟ ಶುರು
ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದೆ. ಇಂದು ನಗರದ ಹಲವು ಕಡೆ ಜೋರು ಮಳೆಯಾಗಿದ್ದು ಜನಜೀವನ ಅಸ್ತವ್ಯಸ್ತವಾಗಿದೆ ಹವಮಾನ ಇಲಾಖೆ ಇಂದು ಮತ್ತು ನಾಳೆ ಬೆಂಗಳೂರಿಗೆ ಎಲ್ಲೋ ಅಲರ್ಟ್ (Yellow Alert) ಘೋಷಣೆ ನೀಡಲಾಗಿದೆ. ಮುಂದಿನ 24 ಗಂಟೆಗಳಲ್ಲಿ ಮಳೆ ರಾಜ್ಯದಲ್ಲಿ ಅಧಿಕ ವಾಗಲಿದೆ.
ಜಿಲ್ಲೆಗಳಿಗೆ ಮುಂದಿನ 24 ಗಂಟೆಗಳ ಕಾಲ ಎಲ್ಲೋ ಅಲರ್ಟ್ ನೀಡಲಾಗಿದೆ:
- ಚಾಮರಾಜನಗರ
- ಚಿಕ್ಕಮಂಗಳೂರು
- ಚಿತ್ರದುರ್ಗ
- ಹಾಸನ
- ತುಮಕೂರು
- ಕೋಲಾರ
- ಮಂಡ್ಯ
- ರಾಮನಗರ
- ಶಿವಮೊಗ್ಗ
- ಚಿಕ್ಕಮಂಗಳೂರು
- ವಿಜಯನಗರ
- ಬಳ್ಳಾರಿ
- ಬೆಂಗಳೂರು ನಗರ
- ಬೆಂಗಳೂರು ಗ್ರಾಮಾಂತರ
ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಂಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಕೋಲಾರ, ಮಂಡ್ಯ, ಚಾಮರಾಜನಗರ, ಚಿತ್ರದುರ್ಗ, ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಬಾರಿ ಮಳೆಯಾಗುವ ಸಾಧ್ಯತೆ ಇದೆ ಇನ್ನು ಮೈಸೂರು, ದಾವಣಗೆರೆ, ಕೊಡಗು, ಹಾಸನದ ಹಲವು ಕಡೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಕರಾವಳಿ ಹಾಗೂ ತೊಳನಾಡಿನಲ್ಲಿ ಹಗುರದಿಂದ ಸಾಧಾರಣವಾಗಿ ತುಂತುರು ಮಳೆಯಾಗುವ ಸಂಭವವಿದೆ ಎಂದು ಐಎಂಡಿ ಸೂಚನೆ ನೀಡಿದೆ.
ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೊಡಕದ ವಾತಾವರಣ ಇರಲಿದ್ದು ಹಾಗೂ ಸಾಧಾರಣವಾಗಿ ಮಳೆಯಾಗುವ ಸಾಧ್ಯತೆ ಇದೆ ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29 ಡಿಗ್ರಿ ಮತ್ತು 20 ಡಿಗ್ರಿ ಆಗಿರಬಹುದು ಎಂದು ಹವಮಾನ ಇಲಾಖೆಯು ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮಳೆ ಹೆಚ್ಚಾಗಿದೆ ಮಧ್ಯಾಹ್ನ ಸಂಜೆ ರಾತ್ರಿ ಅನ್ನದೆ ಗುಡುಗು ಮಿಂಚು ಸಹಿತ ಗಾಳಿ ಸಹಿತ ಮಳೆಯಾಗುತ್ತಿದೆ.
ಇದನ್ನೂ ಓದಿ: Who Eliminated In Bigg Boss Kannada Today!!





