ಎಲ್ಲರಿಗೂ ನಮಸ್ಕಾರ, 2nd ಪಿಯುಸಿ ಪಾಸಾಗಿರುವ ಅಭ್ಯರ್ಥಿಗಳಿಂದ ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಮೈಸೂರು ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ನೇಮಕಾತಿ. ವಯೋಮಿತಿ, ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕೊನೆಯ ದಿನಾಂಕ ಯಾವುದು? ಎಂಬ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೋಡೋಣ.
ಗ್ರಾಮ ಪಂಚಾಯತ್ ನೇಮಕಾತಿ Karnataka
ಅಭ್ಯರ್ಥಿಗಳ ವಯಸ್ಸಿನ ಮಿತಿ:
ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
2A, 2B, 3A, 3B, ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ ಒಂದರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಿತಿ ನಿಗದಿ ಪಡಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಅರ್ಜಿ ಸಲ್ಲಿಸುವ ದಿನಾಂಕ ಅರ್ಜಿಯನ್ನು ಸಲ್ಲಿಸಲು ಪ್ರಾರಂಭದ ದಿನಾಂಕ 3 ಅಕ್ಟೋಬರ್ 2024 ಹಾಗೂ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ 30 ಅಕ್ಟೋಬರ್ 2024.
ಗ್ರಾಮ ಪಂಚಾಯತ್ ಕೆಲಸಕ್ಕೆ ಹೇಗೆ ಅಪ್ಲೈ ಮಾಡಬಹುದು:
ಅರ್ಜಿ ಸಲ್ಲಿಸುವ ವಿಧಾನ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಜಿಲ್ಲಾ ಪಂಚಾಯತ್ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು.
ವಾಸಸ್ಥಳ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವಾಸಿಯಾಗಿರತಕ್ಕದ್ದು
ಸಂಬಂಧಪಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವಾಸಿ ಲಭ್ಯತೆ ಇಲ್ಲದೆ ಇದ್ದಲ್ಲಿ ಆಯಾ ತಾಲೂಕು ಪಂಚಾಯತ್ ವ್ಯಾಪ್ತಿಯಲ್ಲಿನ ಬೇರೆ ಗ್ರಾಮ ಪಂಚಾಯಿತಿಯ ಅಭ್ಯರ್ಥಿಗಳನ್ನು ಆಯ್ಕೆಗೆ ಪರಿಗಣಿಸಲಾಗುವುದು.
ಉದ್ಯೋಗ ಸ್ಥಳ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮೈಸೂರು ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ನಿರ್ವಹಿಸಬೇಕು.
| Apply Now | ಗ್ರಾಮ ಪಂಚಾಯತ್ |
ಒಟ್ಟು ಖಾಲಿ ಹುದ್ದೆ:
ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಗಳ ಸಂಖ್ಯೆ ಒಟ್ಟು 19 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ
ಶೈಕ್ಷಣಿಕ ಅರ್ಹತೆ:
ವಿದ್ಯಾಹರತೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಸರ್ಟಿಫಿಕೇಶನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣಪತ್ರ ಪಡೆದಿರತಕ್ಕದ್ದು ಹಾಗೂ ಕನಿಷ್ಠ ಮೂರು ತಿಂಗಳ ಕಂಪ್ಯೂಟರ್ ಕೋರ್ಸ್ ನಲ್ಲಿ ಉತ್ತೀರ್ಣರಾಗಿರಬೇಕು.
ಇದನ್ನೂ ಓದಿ: VA ಕಡ್ಡಾಯ ಕನ್ನಡ ಪಾಸಿಂಗ್ ಮಾರ್ಕ್ಸ್ ಎಷ್ಟು?










